ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ
ಕಾಲೇಜು ಶಿಕ್ಷಣ ಇಲಾಖೆ ನೇಮಕಾತಿ
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ ಪಡೆದಿರಬೇಕು.
(ಹೆಚ್ಚುವರಿ ವಿದ್ಯಾರ್ಹತೆ ಮತ್ತು ಅನುಭವ ಇತರ ಮಾಹಿತಿಗೆ ಅಧಿಸೂಚನೆ ಗಮನಿಸಿ)
ನೇಮಕಾತಿ ವಿಧಾನ:
ಮೆರಿಟ್ ಪಟ್ಟಿ ತಯಾರಿಸಿ ನೇಮಕಾತಿ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ - ಸೈಟ್ ಪ್ರವೇಶಿಸಿ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 03/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/01/2023
ಮೆರಿಟ್ ಪಟ್ಟಿಯನ್ನುಯ ಸ್ಥಳ ಆಯ್ಕೆ ಕೌನ್ಸಿಲಿಂಗ್ ನಡೆಸುವ ದಿನಾಂಕ:
16/01/2023 ರಿಂದ 25/01/2023 ರ ವರೆಗೆ.
ಸ್ಥಳ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಸಂಬಂಧಪಟ್ಟ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಕೊನೆಯ ದಿನಾಂಕ: 01/02/2023
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವೆಬ್ಸೈಟ್ ವಿಳಾಸ:
https://dce.karnataka.gov.in
1. ಅಭ್ಯರ್ಥಿಗಳು ಪ್ರಾಂಶುಪಾಲರಿಂದ ಹೊಸದಾಗಿ ನಿಗಧಿಪಡಿಸಿರುವ ಸೇವಾ ಪ್ರಮಾಣ ಪತ್ರದ ನಮೂನೆಯಲ್ಲಿ ಸೇವಾ ಅವಧಿಯ ವಿವರಗಳನ್ನು ಪಡೆದು , ಸದರಿ ಸೇವಾ ವಿವರಗಳನ್ನು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸುವುದು . ( ಮಾದರಿ ಸೇವಾ ಪುಮಾಣ ಪತ್ರದ ನಮೂನೆಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ )
2. ಮೇಲೆ ತಿಳಿಸಿದ ಮಾನದಂಡಗಳನ್ನು ಅನುಸರಿಸಿ , ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ವಿದ್ಯಾರ್ಹತೆ ಮತ್ತು ಸೇವಾ ವಿವರಗಳ ಆಧಾರದ ಮೇಲೆ ರಾಜ್ಯವ್ಯಾಪಿ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು .
3. ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಲ್ಲಿ ವಿಷಯವಾರು ಲಭ್ಯವಿರುವ ಕಾರ್ಯಭಾರಕ್ಕನುಗುಣವಾಗಿ ಅಗತ್ಯವಿರುವ ಅರ್ಹ ಅಭ್ಯರ್ಥಿಗಳ ರಾಜ್ಯವ್ಯಾಪಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುವುದು .
4. ಅರ್ಹ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು . ಕೌನ್ಸಿಲಿಂಗ್ ಗೆ ಹಾಜರಾಗದೆ ಇರುವ ಅಭ್ಯರ್ಥಿಗಳಿಗೆ ಮತ್ತೊಮ್ಮ ಕೌನ್ಸಿಲಿಂಗ್ ಗೆ ಅವಕಾಶ ನೀಡಲಾಗುವುದಿಲ್ಲ .
5. ಒಂದು ವೇಳೆ ಅಭ್ಯರ್ಥಿಗಳು ತಪ್ಪು ಮಾಹಿತಿ ನೀಡಿದ್ದಲ್ಲಿ , ಅಂತಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಿಂದ ಅನರ್ಹಗೊಳಿಸಿ , ಅವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
6. ಆನ್‌ಲೈನ್ ಮೂಲಕ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಕುರಿತು ಎಲ್ಲಾ ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜುಗಳ ನೋಟೀಸ್ ಬೋರ್ಡ್‌ನಲ್ಲಿ ಪ್ರಕಟಿಸುವುದರೊಂದಿಗೆ , ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾಹಿತಿಯನ್ನು ನೀಡುವುದು.
7. ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಇಲಾಖೆಯ ಅಂತರ್ಜಾಲ ತಾಣ https://dce.karnataka.gov.in ರಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಸದರಿ ಅಂತರ್ಜಾಲ ತಾಣವನ್ನು ಪ್ರತಿನಿತ್ಯ ಗಮನಿಸಲು ತಿಳಿಸಲಾಗಿದೆ.
EmoticonEmoticon